
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆಯಡಿ ಬರುವ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಈ ಅವಕಾಶವನ್ನು ಉಪಯೋಗಿಸಿಕೊಳ್ಳಬಹುದು.
ರಾಮದುರ್ಗ: ರಾಮದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿ 6 ಅಂಗನವಾಡಿ ಕಾರ್ಯಕರ್ತೆಯರು ಮತ್ತು 27 ಸಹಾಯಕಿಯರ ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು 2025ರ ಮೇ 16ರ ಒಳಗಾಗಿ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ರಾಮದುರ್ಗದ ಮಿನಿ ವಿಧಾನಸೌಧ, 1ನೇ ಮಹಡಿಯಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಭೇಟಿ ನೀಡಬಹುದು ಅಥವಾ 08335-241913 ಗೆ ಸಂಪರ್ಕಿಸಬಹುದು.
ಮೂಡಲಗಿ: ಅರಭಾವಿ ವ್ಯಾಪ್ತಿಯಲ್ಲಿ 15 ಕಾರ್ಯಕರ್ತೆಯರು ಮತ್ತು 50 ಸಹಾಯಕಿಯ ಹುದ್ದೆಗಳಿಗಾಗಿ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಕೆ ಏಪ್ರಿಲ್ 16ರಿಂದ ಆರಂಭವಾಗಿದ್ದು, ಮೇ 16 ಕೊನೆಯ ದಿನಾಂಕವಾಗಿದೆ. ಈ ಹಿಂದೆ 2024ರ ಜುಲೈ 5ರಂದು ಪ್ರಕಟಿಸಿದ್ದ ಅಧಿಸೂಚನೆಯನ್ನು ತಾಂತ್ರಿಕ ಕಾರಣಗಳಿಂದ ರದ್ದುಪಡಿಸಲಾಗಿದೆ, ಮತ್ತು ಅಭ್ಯರ್ಥಿಗಳು ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಗೆ 08334-200367 ಅನ್ನು ಸಂಪರ್ಕಿಸಬಹುದು.
ಬೈಲಹೊಂಗಲ: ಬೈಲಹೊಂಗಲ ಹಾಗೂ ಕಿತ್ತೂರು ತಾಲೂಕಿನಲ್ಲಿ 11 ಕಾರ್ಯಕರ್ತೆಯರು ಹಾಗೂ 44 ಸಹಾಯಕಿಯರ ಹುದ್ದೆಗಳಿವೆ. ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 08288-236119 ನ್ನು ಸಂಪರ್ಕಿಸಬಹುದು.
—
ಗಮನಿಸಿ:
ಅಭ್ಯರ್ಥಿಗಳು 19 ರಿಂದ 35 ವರ್ಷದೊಳಗಿನವರಾಗಿರಬೇಕು.
ಅರ್ಜಿ ಸಲ್ಲಿಕೆ ಆನ್ಲೈನ್ ಮೂಲಕ ಮಾತ್ರ ನಡೆಯುತ್ತದೆ.
ಅರ್ಜಿ ಸಲ್ಲಿಸುವ ಮುನ್ನ ಎಲ್ಲಾ ದಾಖಲೆಗಳನ್ನು ಸಿದ್ಧಗೊಳಿಸಿಕೊಳ್ಳುವುದು ಉತ್ತಮ.
ಈ ನೇಮಕಾತಿ ಮೂಲಕ ಗ್ರಾಮೀಣ ಮಹಿಳೆಯರಿಗೆ ಉದ್ಯೋಗದೊಂದಿಗೆ ಸಮಾಜ ಸೇವೆ ಮಾಡುವ ಅವಕಾಶ ಒದಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಈ ಸುವರ್ಣಾವಕಾಶವನ್ನು ತಪ್ಪಿಸಿಕೊಳ್ಳದೇ ಅರ್ಜಿ ಸಲ್ಲಿಸಬೇಕೆಂದು ವಿನಂತಿ.
ಹೆಚ್ಚಿನ ಮಾಹಿತಿಗಾಗಿ 👇🏻👇🏻👇🏻
https://karnemakaone.kar.nic.in/abcd